ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಷೇರು ಮಾರುಕಟ್ಟೆಯಲ್ಲಿ ನಷ್ಟ ಅನುಭವಿಸಿದ ಉಪನ್ಯಾಸಕರೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಾಡ್ಜ್ ನಲ್ಲಿ ನೇಣು ಹಾಕಿಕೊಂಡು ವೀರಶೆಟ್ಟಿ(43) ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಕುರಿತು ಡೆತ್ ನೋಟ್ ಪತ್ತೆಯಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದೆ. ಅದರಲ್ಲಿ ನಷ್ಟ ಅನುಭವಿಸಿದೆ ಎಂದು ಬರೆದಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಚಿಂಚೋಳಿ ತಾಲೂಕಿನ ಲಿಂಗದಳ್ಳಿ ಗ್ರಾಮದ ವೀರಶೆಟ್ಟಿ, ಬೀದರ ಜಿಲ್ಲೆಯ ಬಸವಕಲ್ಯಾಣದಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಷೇರು ಮಾರುಕಟ್ಟೆಯಿಂದ(Stock Market )ಆದ ನಷ್ಟದಿಂದ ಹೊರ ಬರಲು ಆಗದೆ ಆತ್ಮಹತ್ಯೆಯ ಹಾದಿ ಹಿಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರ ಈ ಕುರಿತು ತನಿಖೆ ನಡೆಸಿದ್ದು, ಸತ್ಯಾಸತ್ಯತೆ ಹೊರ ಬರಬೇಕಿದೆ.