ಪ್ರಜಾಸ್ತ್ರ ಸುದ್ದಿ
ಧರ್ಮಸ್ಥಳ(Dharmastal): ಇಲ್ಲಿನ ಬೊಳಿಯೂರು ಮೂಲದ ಯುವತಿ ಆಕಾಂಕ್ಷ ಪಂಜಾಬ್ ನ ಎಲ್ ಪಿಯು ಪಗ್ವಾಡ್ ಕಾಲೇಜಿನ ಮೂರನೇ ಮಹಡಿಯಿಂದ ಬಿದ್ದು ಶನಿವಾರ ಮೃತಪಟ್ಟಿದ್ದಾಳೆ. ಈ ನಿಗೂಢ ಸಾವಿನ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಕಾಲೇಜಿನ ಪ್ರಾಧ್ಯಾಪಕ ಕೇರಳ ಮೂಲದ ಬಿಜಿಲ್ ಮ್ಯಾಥ್ಯೂ ಎಂಬುವರನ್ನು ಪ್ರೀತಿಸುತ್ತಿದ್ದಳಂತೆ. ಇದಕ್ಕೆ ಅವರು ಒಪ್ಪಿರಲಿಲ್ಲವಂತೆ. ನನಗೆ ಈಗಾಗ್ಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎಂದು ಹೇಳಿದ್ದು, ಇದರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗುತ್ತಿದೆ. ಜಲಂಧರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಳೆದ 6 ತಿಂಗಳಿನಿಂದ ದೆಹಲಿಯ ಜೆಟ್ ಏರೊಸ್ಪೇಸ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಜಪಾನಿಗೆ ಹೋಗಲು ಸಿದ್ಧತೆ ನಡೆಸಿದ್ದ ಆಕಾಂಕ್ಷ ಕಾಲೇಜಿನಲ್ಲಿ ಪ್ರಮಾಣ ಪತ್ರ ತರಲು ಸ್ನೇಹಿತನ ಜೊತೆಗೆ ಶನಿವಾರ ಅಲ್ಲಿಗೆ ಹೋಗಿದ್ದಳು. ಆದರೆ, ಬಳಿಕ ಆಕೆ ಮೃತಪಟ್ಟಿದ್ದಾಳೆ ಎನ್ನುವ ಸುದ್ದಿ ತಿಳಿದು ಬಂದಿದೆ. ಇಂದು ಸಂಜೆ ಬೊಳಿಯೂರು ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಪೊಲೀಸ್ ತನಿಖೆಯಿಂದ ಸತ್ಯಾಸತ್ಯತೆ ತಿಳಿದು ಬರಬೇಕಿದೆ.