ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾಗಿದ್ದಾರೆ. ಬಾರಾಮತಿ ಹತ್ತಿರ ಬುಧವಾರ ಮುಂಜಾನೆ ಈ ಘಟನೆ ಸಂಭವಿಸಿದೆ. ಅಜಿತ್ ಪವಾರ್ ಸೇರಿ ಐವರು ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಸ್ಥಳೀಯ ಚುನಾವಣೆಯಲ್ಲಿ ನಿಗದಿತ ಪ್ರಚಾರದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಅಜಿತ್ ಪವಾರ್, ಪಿಎಸ್ಓ ಜಾಧವ್, ಒಬ್ಬ ಸಹಾಯಕ, ಇಬ್ಬರು ಪೈಲೆಟ್ ಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ವಿಮಾನಯಾನ ಸಚಿವಾಲಯ ತಿಳಿಸಿದೆ.




