ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): 288 ಸದಸ್ಯರನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ತನ್ನ 2ನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಇಂದು 23 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಗುರುವಾರ 48 ಅಭ್ಯರ್ಥಿಗಳನ್ನು ಘೋಷಿಸಿತ್ತು. ಇದರೊಂದಿಗೆ 71 ಅಭ್ಯರ್ಥಿಗಳ ಹೆಸರು ಅಂತಿಮಗೊಂಡಿದೆ. ಇನ್ನು 15 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಬೇಕಿದೆ.
ಕಾಂಗ್ರೆಸ್, ಉದ್ಧವ್ ಠಾಕ್ರೆ ಬಣದ ಶಿವಸೇನೆ ಹಾಗೂ ಶರದ್ ಪವಾರ್ ಬಣದ ರಾಷ್ಟ್ರೀಯವಾದಿ ಕಾಂಗ್ರೆಸ್ ನಡುವೆ ಮೈತ್ರಿಯಾಗಿದೆ. ಈ ಮೂರು ಪಕ್ಷಗಳು ತಲಾ 85 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಉಳಿದ 18 ಸ್ಥಾನಗಳನ್ನು ಇವರೊಂದಿಗೆ ಕೈ ಜೋಡಿಸಿರುವ ಇತರೆ ಪಕ್ಷಗಳಿಗೆ ಬಿಟ್ಟು ಕೊಡಲಾಗಿದೆ. ಇನ್ನು ಸಿಎಂ ಏಕನಾಥ್ ಶಿಂದೆ ಬಣದ ಶಿವಸೇನೆ, ಅಜಿತ್ ಪವಾರ್ ಬಣದ ಎನ್ ಸಿಪಿ ಹಾಗೂ ಬಿಜೆಪಿ ಮೈತ್ರಿಯ ಸರ್ಕಾರವಿದೆ. ಇವರು ಒಟ್ಟಿಗೆ ಚುನಾವಣೆ ಎದುರಿಸಲಿದ್ದಾರೆ.