ಪ್ರಜಾಸ್ತ್ರ ಸುದ್ದಿ
ನವದೆಹಲಿ(New Delhi): ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್(Maharashtra and Jharkhand Election) ವಿಧಾನಸಭಾ(Assembly Election)ಚುನಾವಣಗೆ ದಿನಾಂಕ ಘೋಷಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಈ ಕುರಿತು ಮಂಗಳವಾರ ಮಾಹಿತಿ ನೀಡಿದ್ದಾರೆ. 288 ಸ್ಥಾನಗಳ ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. 81 ಸ್ಥಾನಗಳ ಜಾರ್ಖಂಡ್ ನಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ.
ಮೊದಲು ಜಾರ್ಖಂಡ್ ನಲ್ಲಿ ನವೆಂಬರ್ 13ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. ನವೆಂಬರ್ 20ರಂದು 2ನೇ ಹಂತ ಹಾಗೂ ಮಹಾರಾಷ್ಟ್ರದಲ್ಲಿ ಇದೇ ದಿನ ಚುನಾವಣೆ ನಡೆಯಲಿದೆ. ಅಕ್ಟೋಬರ್ 22ರಂದು ಅಧಿಸೂಚನೆ ಹೊರ ಬೀಳಲಿದೆ. ನವೆಂಬರ್ 4 ನಾಮಪತ್ರ ಹಿಂದಕ್ಕೆ ಪಡೆಯುವುದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ. ಜಾರ್ಖಂಡ್ ನ ಮೊದಲ ಹಂತದ ಚುನಾವಣೆಗೆ ಅಕ್ಟೋಬರ್ 18 ಅಧಿಸೂಚನೆ, ಅಕ್ಟೋಬರ್ 25 ಕೊನೆಯ ದಿನಾಂಕ, ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯುವ ದಿನವಾಗಿದೆ.