ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಭಾನುವಾರ ಎಲ್ಲೆಡೆ ಮಹಾಶಿವರಾತ್ರಿಯನ್ನು ಆಚರಿಸಲಾಗುತ್ತಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿವೆ. ರಾತ್ರಿಪೂರ್ತಿ ಶಿವನ ಜಪ ಮಾಡಲು ದೇವಸ್ಥಾನಗಳಲ್ಲಿ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಶಿವರಾತ್ರಿ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಭಾನುವಾರ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಈ ಬಗ್ಗೆ ಆದೇಶ ಹೊರಡಿಸಿದೆ.
ನಾಳೆ ಇಡೀ ದಿನ ಜಿಬಿಎ ವ್ಯಾಪ್ತಿಯಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ಮಾಡುವಂತಿಲ್ಲವೆಂದು ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡುವುದು ಕಂಡು ಬಂದರೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.




