ಪ್ರಜಾಸ್ತ್ರ ಸುದ್ದಿ(Photo-PTI)
ನವದೆಹಲಿ(New Delhi): ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು 78ನೇ ಪುಣ್ಯಸ್ಮರಣೆಯ ಅಂಗವಾಗಿ ರಾಜ್ ಘಾಟ್ ನಲ್ಲಿರುವ ಗಾಂಧಿಯವರ ಸ್ಮಾರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಪೂಜ್ಯ ಬಾಪು ಅವರು ಯಾವಾಗಲೂ ಸ್ವದೇಶಿ ವಸ್ತುಗಳ ಬಳಕೆ ಕುರಿತು ಹೆಚ್ಚು ಒತ್ತು ನೀಡಿದ್ದರು. ಅವರ ವ್ಯಕ್ತಿತ್ವ ಹಾಗೂ ಸೃಜನಶೀಲತೆ ದೇಶದ ಜನರಿಗೆ ಕರ್ತವ್ಯದ ದಾರಿಯಲ್ಲಿ ನಡೆಯಲು ಪ್ರೇರಣೆಯಾಗಿದೆ ಎಂದಿದ್ದಾರೆ.
ಮಹಾತ್ಮ ಗಾಂಧಿ ಕೇವಲ ಒಬ್ಬ ವ್ಯಕ್ತಿಯಲ್ಲ. ಅವರೊಂದು ಕಲ್ಪನೆ, ಕೆಲವೊಮ್ಮೆ ಸಾಮ್ರಾಜ್ಯ. ದ್ವೇಷದಿಂದ ಕೂಡಿದ ಸಿದ್ಧಾಂತ, ಸರ್ವಾಧಿಕಾರವನ್ನು ಅಳಿಸಿಹಾಕುವಂತೆ ಮಾಡುವ ಒಂದು ಆಲೋಚನೆಯಾಗಿದ್ದಾರೆ. ಅಧಿಕಾರದ ಬಲಕ್ಕಿಂತ ಸತ್ಯದ ಶಕ್ತಿ ದೊಡ್ಡದು. ಅಹಿಂಸೆ ಮತ್ತು ಧೈರ್ಯವು ಹಿಂಸೆ ಹಾಗೂ ಭಯಕ್ಕಿಂತ ದೊಡ್ಡದು ಅನ್ನೋ ತತ್ವವನ್ನು ಬಿಟ್ಟು ಹೋಗಿದ್ದಾರೆ ಅಂತಾ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.




