ಪ್ರಜಾಸ್ತ್ರ ಸುದ್ದಿ
ದಕ್ಷಿಣ ಕನ್ನಡ(Dakshin Kannada): ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದೆ. ಪುತ್ತೂರು ಎಸಿ ಅವರು 2ನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದನ್ನು ಮರುಪರಿಶೀಲಿಸಲು ಕೋರ್ಟ್ ಹೇಳಿತ್ತು. ಹೀಗಾಗಿ ಮರುಪರಿಶೀಲನೆ ಮಾಡಿ ಡಿಸೆಂಬರ್ 17ರಂದು ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಉಜಿರೆಯಲ್ಲಿರುವ ತಿಮರೋಡಿ ಮನೆಗೆ ಹೋದಾಗ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.




