ಪ್ರಜಾಸ್ತ್ರ ಸುದ್ದಿ
ಉಡುಪಿ(Udupi): ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನುವ ಕಾರಣಕ್ಕೆ, ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಉಜಿರೆಯಲ್ಲಿರುವ ನಿವಾಸಕ್ಕೆ ಪೊಲೀಸರು ಬಂದು ವಶಕ್ಕೆ ಪಡೆದಿದ್ದಾರೆ.
ಬುಧವಾರ ವಿಚಾರಣೆಗೆ ಬರಬೇಕು ಎಂದು ನೋಟಿಸ್ ನೀಡಲಾಗಿತ್ತು. ಆದರೆ, ಬಂದಿಲ್ಲವೆಂದು ಅವರ ನಿವಾಸಕ್ಕೆ ಆಗಮಿಸಿದ್ದಾರೆ. ಹೀಗಾಗಿ ಅವರನ್ನು ಕರೆದುಕೊಂಡು ಹೋಗುವ ಮೊದಲು ಸಾಕಷ್ಟು ವಾದ ವಿವಾದ ನಡೆಯಿತು. ಅವರ ಬೆಂಬಲಿಗರು ಬಂದು ಪೊಲೀಸರೊಂದಿಗೆ ವಾದ ಮಾಡಿದರು. ಕೊನೆಯದಾಗಿ ಅವರನ್ನು ಕರೆದುಕೊಂಡು ಹೋಗಲಾಗಿದೆ ಎಂದು ಹೇಳಲಾಗುತ್ತಿದೆ. ಅವರೊಂದಿಗೆ ಗಿರೀಶ್ ಮಟ್ಟಣ್ಣನವರ್ ಇದ್ದಾರೆ.