ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಭಾರತೀಯ ಸೇನಾಧಿಕಾರಿ ಮೇಜರ್ ಸ್ವಾತಿ ಶಾಂತಿಕುಮಾರ್ ಅವರಿಗೆ ವಿಶ್ವ ಸಂಸ್ಥೆಯ ಪ್ರಶಸ್ತಿ ಒಲಿದು ಬಂದಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ನೀಡುವ ‘ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ-2025ಕ್ಕೆ ಬೆಂಗಳೂರು ಮೂಲದ ಸ್ವಾತಿ ಶಾಂತಿಕುಮಾರ್ ಆಯ್ಕೆ ಆಗಿದ್ದಾರೆ. ಕಳೆದ 8 ವರ್ಷಗಳಿಂದ ಭಾರತೀಯ ಸೇನೆಯಲ್ಲಿದ್ದು, ಒಂದೂವರೆ ವರ್ಷದಿಂದ ದಕ್ಷಿಣ ಸೂಡಾನ್ ನಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಸಂಘರ್ಷ ಪೀಡಿತ ದಕ್ಷಿಣ ಸೂಡಾನ್ ನಲ್ಲಿ ಮಹಿಳೆಯರ ರಕ್ಷಣೆ, ಸಮುದಾಯದ ನೆಮ್ಮದಿಗೆ ತೆಗೆದುಕೊಂಡು ಕ್ರಮಗಳಿಗಾಗಿ ಈ ಪ್ರಶಸ್ತಿ ಒಲಿದಿದೆ. ಸುಡಾನ್ ನಲ್ಲಿ 5 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರ್ ಹೇಳಿದ್ದಾರೆ.
ಎಂಜಿನಿಯರಿಂಗ್ ಪದವಿ ಪಡೆದಿರುವ ಶಾಂತಿ ಬೆಂಗಳೂರಿನ ಲಿಂಗರಾಜಪುರದ ಖಾಸಗಿ ಕಂಪನಿ ಉದ್ಯೋಗಿ ಶಾಂತಕುಮಾರ್ ಹಾಗೂ ಸರ್ಕಾರಿ ಶಾಲೆಯ ಶಿಕ್ಷಕಿ ರಾಜಮಣಿ ದಂಪತಿಯ ಪುತ್ರಿಯಾಗಿದ್ದಾರೆ.




