ಪ್ರಜಾಸ್ತ್ರ ಸುದ್ದಿ
ಮುಂಬೈ(Mumbai): ಮಾಲೆಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ 7 ಆರೋಪಿಗಳನ್ನು ಮುಂಬೈ ವಿಶೇಷ ನ್ಯಾಯಾಲಯ ಖುಲಾಸೆಗೊಳಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಪ್ರಕರಣಗಳ ವಿಚಾರಣೆಗೆ ಸಂಬಂಧಪಟ್ಟಂತೆ ಇರುವ ವಿಶೇಷ ನ್ಯಾಯಾಧೀಶ ಎ.ಕೆ ಲಹೋಟಿ ಅವರು, ತನಿಖೆಯಲ್ಲಿ ಹಲವಾರು ಲೋಪದೋಷಗಳಿವೆ ಎಂದು ಹಾಗೂ ಸಾಕ್ಷಾಧಾರಗಳು ಕೊರತೆವೆ ಎಂದು ಹೇಳಲಾಗಿದೆ.
ಸೆಪ್ಟೆಂಬರ್ 29, 2008ರಲ್ಲಿ ಮುಂಬೈನ ಮಾಲೆಗಾಂವ್ ಪಟ್ಟಣದಲ್ಲಿನ ಮಸೀದಿಯೊಂದರ ಬಳಿ ಬೈಕ್ ಗೆ ಕಟ್ಟಲಾಗಿದ್ದ ಸ್ಫೋಟಕ ವಸ್ತು ಸ್ಫೋಟಗೊಂಡಾಗ 6 ಜನರು ಮೃತಪಟ್ಟಿದ್ದರು. ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇದರಲ್ಲಿ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್, ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ 7 ಆರೋಪಿಗಳನ್ನು ಬಂಧಿಸಲಾಗಿತ್ತು.