ಪ್ರಜಾಸ್ತ್ರ ಸುದ್ದಿ
ಕಲಬುರಗಿ(Kalaburagi): ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಾಕಷ್ಟು ಹೇಳಿಕೆಗಳು ಬರುತ್ತಿವೆ. ಈ ಬಗ್ಗೆ ಮಾತನಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಈಗಿನ ಎಲ್ಲ ಗೊಂದಲಗಳಿಗೆ ಸ್ಥಳೀಯ ನಾಯಕರೇ ಪರಿಹರಿಸಿಕೊಳ್ಳಬೇಕು. ನಾಯಕತ್ವದ ಗೊಂದಲ ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಎಲ್ಲದಕ್ಕೂ ಹೈಕಮಾಂಡ್ ನತ್ತ ಬೊಟ್ಟು ಮಾಡಿದರೆ ಹೇಗೆ ಎಂದಿದ್ದಾರೆ.
ಐದು ವರ್ಷ ನಾನೇ ಮುಖ್ಯಮಂತ್ರಿ. ಯಾವುದೇ ಒಪ್ಪಂದವಾಗಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಿರುವ ವಿಚಾರ ಸಂಬಂಧ ಇಬ್ಬರನ್ನು ಹೈಕಮಾಂಡ್ ಸೂಕ್ತ ಸಮಯದಲ್ಲಿ ಕರೆಸುವುದಾಗಿ ಹೇಳಿದೆ ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿರುವ ಮಾತಿಗೆ, ಹೈಕಮಾಂಡ್ ದೂಷಿಸುವ ಬದಲು ಆಂತರಿಕ ಗೊಂದಲವನ್ನು ಸ್ಥಳೀಯ ನಾಯಕರು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.




