ಪ್ರಜಾಸ್ತ್ರ ಸುದ್ದಿ
ಮಂಡ್ಯ(Mandaya): ಶಿಂಷಾ ಏತ ನೀರಾವರಿ ಯೋಜನೆಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಜ್ಞಾನೇಶ್(30) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈತ ಮೈಸೂರು ಜಿಲ್ಲೆಯ ಪಿರಿಯಾಟ್ಟಣ ನಿವಾಸಿ ಎಂದು ತಿಳಿದು ಬಂದಿದೆ.
ಕುರುಬರದೊಡ್ಡಿ ಗ್ರಾಮದಲ್ಲಿ ನೀರಿನ ಟ್ಯಾಂಕರ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಈ ರೀತಿ ಮಾಡಿಕೊಂಡಿದ್ದಾನೆ ಎನ್ನುವ ನಿಖರ ಮಾಹಿತಿ ಲಭ್ಯವಾಗಿಲ್ಲ. ಕೆಸ್ತೂರು ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸ್ ತನಿಖೆಯಿಂದ ಆತ್ಮಹತ್ಯೆಯ ಹಿಂದಿನ ಸತ್ಯ ತಿಳಿದು ಬರಬೇಕಿದೆ.