ಪ್ರಜಾಸ್ತ್ರ ಸುದ್ದಿ
ಮಂಡ್ಯ(Mandaya): ಪ್ರಧಾನಿ ಮೋದಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾದ ಪೋಸ್ಟ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಬಂಧಿತ ಆರೋಪಿಯಾಗಿದ್ದಾನೆ. ಪ್ರಧಾನಿ ಮೋದಿ, ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಕಾಲು ಹಿಡಿಯುತ್ತಿರುವ, ಶೂ ಬಿಚ್ಚುತ್ತಿರುವ ರೀತಿಯಲ್ಲಿ ಎಐ ಮೂಲಕ ಫೋಟೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ.
ಆರೋಪಿ ಜಾವೀದ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ದೂರು ದಾಖಲಿಸಿಕೊಂಡ ಪೊಲೀಸರು ಜಾವೀದ್ ನನ್ನು ಬಂಧಿಸಿದ್ದು, ಬಿಎನ್ಎಸ್ ಕಾಯ್ದೆ 152, 192, 340ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.