ಪ್ರಜಾಸ್ತ್ರ ಸುದ್ದಿ
ಮಂಡ್ಯ(Kirugavalu): ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಲಿಗೆ ಗುಂಡೇಟು ಹೊಡೆದು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಜಿಲ್ಲಾಸ್ಪಾತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬಂಧಿಸಲು ಹೋದಾಗ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಂಡು ಓಡುವ ವೇಳೆ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.