ಪ್ರಜಾಸ್ತ್ರ ಸುದ್ದಿ
ಮಂಗಳೂರು(Mangaloru): ನಾನು ಭಾರತವನ್ನು ದ್ವೇಷಿಸುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆ ಆಸಿಫಾ ಫಾತಿಮಾ ಅನ್ನೋರ ವಿರುದ್ಧ ಎಫ್ಐಆರ್ ದಾಖಲಾಗಿದೆ. ದೇಶದಲ್ಲಿ ಇದೀಗ ಯಾವ ಪರಿಸ್ಥಿತಿ ಇದೆ ಅನ್ನೋದು ತಿಳಿದು ದೇಶ ವಿರೋಧಿ ಪೋಸ್ಟ್ ಹಾಕಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಆಕೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ನಾನು ಭಾರತೀಯಳು. ಆದರೆ, ನಾನು ಭಾರತವನ್ನು ದ್ವೇಷಿಸುತ್ತೇನೆ. ಕೊಳಕು ಹಿಂದುಗಳು ನನ್ನ ಹಿಂದೆ ಬಿದ್ದಿದ್ದಾರೆ ಎಂದು ಪೋಸ್ಟ್ ಮಾಡಿದ್ದಾಳೆ. ಇದಕ್ಕೆ ವ್ಯಾಪಾಕ ಆಕ್ರೋಶ ವ್ಯಕ್ತಪಡಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆಯ ಹೆಚ್ಆರ್ ಮೊಹಮ್ಮದ್ ಅಸ್ಸಾಂ, ವೈದ್ಯೆ ಆಸಿಫಾ ಫಾತಿಮಾಳನ್ನು ವಜಾಗೊಳಿಸಿದ್ದಾರೆ. ಇದೀಗ ಈಕೆಯ ವಿರುದ್ಧ ಎಫ್ಐಆರ್ ದಾಖಲಾಗಿದೆ.