ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ.ಮನಮೋಹನ್ ಸಿಂಗ್(92) ಗುರುವಾರ ರಾತ್ರಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಇಂದು ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಲಾಗಿದೆ. ಒಂದು ವಾರಗಳ ಕಾಲ ಶೋಕಾಚರಣೆ ಸೂಚಿಸಿ ಆದೇಶ ಹೊರಡಿಸಲಾಗಿದೆ. ಇಂದು ಎಲ್ಲ ಶಾಲಾ, ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಇನ್ನು ಬೆಳಗಾವಿಯಲ್ಲಿ 2ನೇ ದಿನದ ಗಾಂಧಿ ಭಾರತ ಕಾರ್ಯಕ್ರಮವನ್ನು ಸಹ ರದ್ದುಗೊಳಿಸಲಾಗಿದೆ. 2004ರಿಂದ 2014ರ ತನಕ ಎರಡು ಅವಧಿಗೆ ಪ್ರಧಾನಿಯಾಗಿ ಅಧಿಕಾರ ನಡೆಸಿದ ಮನಮೋಹನ್ ಸಿಂಗ್ ಅವರು ತಮ್ಮ ಆರ್ಥಿಕ ಚಾಣಕ್ಷತನದಿಂದ ಹಲವಾರು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಅದು ಭಾರತದ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಿದೆ.