ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ಸೇರುತ್ತಾರೆ ಎನ್ನುವ ದೊಡ್ಡ ಮಟ್ಟದ ಚರ್ಚೆಯ ಹೊತ್ತಿನಲ್ಲಿ ಅವರೆ ಹೊಸದೊಂದು ಬಾಂಬ್ ಸಿಡಿಸಿದ್ದಾರೆ. ಹಲವು ಬಿಜೆಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ನಮ್ಮನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಇತ್ತೀಚಿನ ಚರ್ಚೆಗೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.
ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿ ಇರುವ ಬಗ್ಗೆ ಸಚಿವರು ಸಹ ಚರ್ಚಿಸುತ್ತಿದ್ದಾರೆ. ಯಾರೆಲ್ಲ ನಮ್ಮ ಸಂಪರ್ಕದಲ್ಲಿದ್ದಾರೆ ಅನ್ನೋದು ಈಗ ಬಹಿರಂಗಗೊಳಿಸುವುದಿಲ್ಲ. ಕಾಂಗ್ರೆಸ್ ಒಗ್ಗಟ್ಟಿನ ಮನೆ. ಬಿಜೆಪಿ ಒಡೆದ ಮನೆಯಾಗಿದೆ ಎನ್ನುವ ಮೂಲಕ ಬಿಜೆಪಿ ಸೇರಿಯೇ ಬಿಡುತ್ತಾರೆ ಎನ್ನುವ ಮಾತುಗಳಿಗೆ ಉತ್ತರ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.