ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಸಿಲಿಕಾನ್ ಸಿಟಿಯಲ್ಲಿ ಸತತವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯವಸ್ಥವಾಗಿದೆ. ಪಶ್ಚಿಮ ಬಂಗಾಳ ವಾಯುಭಾರ ಕುಸಿತದ ಹೊಡೆತ ಕರ್ನಾಟಕದ ಮೇಲೆ ಭಾರಿ ಆಗಿದೆ. ಸುಮಾರು 300 ಎಕರೆ ವಿಸ್ತೀರ್ಣದಲ್ಲಿರುವ ಮಾನ್ಯತಾ ಟೆಕ್ ಪಾರ್ಕ್(Manyata Tech Park) ಸಂಪೂರ್ಣ ಜಲಬಂಧನಕ್ಕೆ ಒಳಗಾಗಿದೆ. ಇದು ಸಾಲದು ಎಂಬಂತೆ ಭೂಕುಸಿತವಾಗಿದೆ. ಇದರಿಂದಾಗಿ ಇಲ್ಲಿನ ಜನಕ್ಕೆ ಪ್ರವಾಹದ(Flood) ಪರಿಸ್ಥಿತಿ ಎದುರಿಸಿದಂತಾಗುತ್ತಿದೆ.
ಇಲ್ಲಿ ನಿರ್ಮಾಣ ಹಂತದಲ್ಲಿದ್ದ ಬಹುಮಹಡಿ ಕಟ್ಟಡದಲ್ಲಿ ಮಣ್ಣು ಕುಸಿತವಾಗಿದೆ. ಬೃಹತ್ ಮರವೊಂದು ಉರುಳಿ ಬಿದ್ದಿದೆ. ಎಲ್ಲಿಯೂ ಸರಿಯಾಗಿ ನೀರು ಹೋಗದೆ ಕೃತಕ ಜಲಪಾತ ಸೃಷ್ಟಿಯಾಗಿದೆ. ಬ್ರ್ಯಾಂಡ್ ಬೆಂಗಳೂರು ಎಂದು ಹೇಳುತ್ತಿರುವವರು ಏನು ಮಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗು ಬೆಂಗಳೂರು ನಗರಾಭಿವೃದ್ಧಿ ಖಾತೆ ಸಚಿವ ಡಿ.ಕೆ ಶಿವಕುಮಾರ್ ವಿರುದ್ಧ ಸಾರ್ವಜಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.