ಪ್ರಜಾಸ್ತ್ರ ಸುದ್ದಿ
ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟರ ಚಿತ್ರಗಳ ನಡುವೆ ಬಿಗ್ ಫೈಟ್ ನಡೆಯಲಿದೆ. ಯಾಕಂದರೆ ಡಿಸೆಂಬರ್ 25ರಂದು ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಹಾಗೂ ಸಂಚುರಿ ಸ್ಟಾರ್ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ 45 ಸಿನಿಮಾ ಬಿಡುಗಡೆಯಾಗುತ್ತಿದೆ. ಒಂದು ಕಡೆ ಅಭಿಮಾನಿಗಳಿಗೆ ಕಿಕ್ ಜೊತೆಗೆ ಕಾಂಪಿಟೇಷನ್ ಸಹ ಇದೆ.
ಎರಡು ಬಹುನಿರೀಕ್ಷಿತ ಚಿತ್ರಗಳು ಏಕಕಾಲಕ್ಕೆ ಬಿಡುಗಡೆಯಾಗುತ್ತಿವೆ. ಮತ್ತೊಂದು ಈಗಾಗ್ಲೇ ಬಿಡುಗಡೆಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಸಹ ಥಿಯೇಟರ್ ನಲ್ಲಿದೆ. ಈ ಎಲ್ಲ ಕಾರಣಗಳಿಂದ ಇದೊಂದು ರೀತಿಯಲ್ಲಿ ಸ್ಟಾರ್ ನಟರ ಚಿತ್ರಗಳ ನಡುವೆ ದೊಡ್ಡ ಮಟ್ಟದ ಫೈಟ್ ಎಂದು ಹೇಳಬಹುದು.
2024ರಲ್ಲಿ ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ನಿರ್ದೇಶನ ಮಾಡಿದ ವಿಜಯ್ ಕಾರ್ತಿಕೇಯನ್ ಮಾರ್ಕ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಹೀಗಾಗಿ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಳ್ಳಲಾಗಿದೆ. ಇನ್ನೊಂದು ಕಡೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮೊದಲ ಬಾರಿಗೆ ನಿರ್ದೇಶನದ ಕ್ಯಾಪ್ ತೊಟ್ಟು 45 ಅನ್ನೋ ಸಿನಿಮಾ ಮಾಡಿದ್ದಾರೆ. ಇದರಲ್ಲಿ ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅಭಿನಯಿಸಿದ್ದು, ಇದರ ಮೇಲೆಯೂ ಸಾಕಷ್ಟು ನಿರೀಕ್ಷೆಯಿದೆ. ಯಾವ ಸಿನಿಮಾ ಕಲೆಕ್ಷನ್ ವಿಚಾರದಲ್ಲಿ ಸೌಂಡ್ ಮಾಡುತ್ತೆ. ದರ್ಶನ್ ನಟನೆಯ ಡೆವಿಲ್ ಚಿತ್ರದ ಮೊದಲ ದಿನದ ಕಲೆಕ್ಷನ್ ಬೀಟ್ ಮಾಡುತ್ತಾ ಅನ್ನೋ ಕುತೂಹಲವಿದೆ.




