ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ನಟ ಧ್ರುವ್ ಸರ್ಜಾ ಅಭಿನಯದ ಮಾರ್ಟಿನ್ ಚಿತ್ರದ ಬಗ್ಗೆ ನೆಗೆಟಿವ್ ವಿಮರ್ಶೆ ಮಾಡಿದ್ದ ಯುಟ್ಯೂಬ್ ಸ್ಟಾರ್ ಸುಧಾಕರ್ ವಿರುದ್ಧ ಫ್ಯಾನ್ಸ್ ಗರಂ ಆಗಿದ್ದಾರೆ. ಅವರಿಗೆ ಬೆದರಿಕೆ ಕರೆಗಳು ಸಹ ಬಂದಿವೆ ಎಂದು ಸುಧಾಕರ್ ಹೇಳಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿಡಿಯೋ ಡಿಲಿಟ್ ಮಾಡಿಸಿ ಕ್ಷಮಾಪಣಾ ಪತ್ರ ಬರೆಸಿಕೊಂಡು ಕಳಿಸಿದ್ದರು. ಆದರೆ, ಇದೀಗ ಹಲ್ಲೆ ಪ್ರಕರಣ ಸಂಬಂಧ ಬಂಧಿಸಲಾಗಿದೆ.
ಹಲ್ಲೆ ಪ್ರಕರಣವೊಂದರಲ್ಲಿ ಸುಧಾಕರ್ ಭಾಗಿಯಾಗಿದ್ದ ಎಂದು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಹಣ ಕೊಟ್ಟು ಸಿನಿಮಾ ನೋಡುವ ಪ್ರೇಕ್ಷಕರು ತಮ್ಮ ಅಭಿಪ್ರಾಯ ಹೇಳುವುದಕ್ಕೂ ನಟರ ಅಭಿಮಾನಿಗಳು ವಿರೋಧ, ಧಮ್ಕಿ, ಕೇಸ್ ದಾಖಲಿಸುವುದು ಮಾಡುತ್ತಾ ಹೋದರೆ ಮುಂದಿನ ದಿನಗಳಲ್ಲಿ ಕನ್ನಡ ಸಿನಿಮಾಗಳನ್ನು ನೋಡುಗರ ಸಂಖ್ಯೆ ಇನ್ನಷ್ಟು ಕಡಿಮೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.