ಪ್ರಜಾಸ್ತ್ರ ಸುದ್ದಿ
ವಿಜಯಪುರ(Vijayapura): ಭಾರತ ಸರ್ಕಾರದ(Indian Govt) ಪರಮಾಣು ಶಕ್ತಿ ಇಲಾಖೆಯ ಅಧೀನದಲ್ಲಿನ ಹೈದರಾಬಾದ್ ಮೂಲದ ಟಾಟಾ(TATA) ಮೂಲಭೂತ ಸಂಶೋಧನಾ ಸಂಸ್ಥೆ (ಟಾಟಾ ಇನ್ ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರೀಸರ್ಚ್) ಹವಾಮಾನ ಹಾಗೂ ವಾತಾವರಣ ಅಧ್ಯಯನಕ್ಕಾಗಿ ಉಡಾವಣೆ ಮಾಡಿದ್ದ ಹವಾಮಾನ ಅಧ್ಯಯನಾಶೀಲ ವೈಜ್ಞಾನಿಕ ಉಪಕರಣ ( ಪೇಲೋಡ್ )ವೊಂದು ಪ್ಯಾರಾಚೂಟ್ ನ ನೆರವಿನಿಂದ ಚಡಚಣ(Chadachana) ತಾಲೂಕಿನ ಗ್ರಾಮವೊಂದರ ಜಮೀನಿನಲ್ಲಿ ಬಂದಿಳಿದಿದೆ. ಇದರಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿತ್ತು. ಈ ಬಗ್ಗೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ. ಯಾರೂ ಆತಂಕ ಪಡಬಾರದು ಎಂದು ತಿಳಿಸಲಾಗಿದೆ.
ಜಿಲ್ಲಾಡಳಿತವು ಸಂಬಂಧಪಟ್ಟ ಸಂಸ್ಥೆಯನ್ನು ಸಂಪರ್ಕಿಸಿ ಈಗಾಗಲೇ ಮಾಹಿತಿ ಪಡೆದಿದೆ. ಸಂಸ್ಥೆಯ ಅಧಿಕಾರಿಗಳ ತಂಡ ಸದ್ಯದಲ್ಲಿಯೇ ವಿಜಯಪುರಕ್ಕೆ ಆಗಮಿಸಲಿದೆ. ಅಲ್ಲದೆ, ಜಮೀನಿನಲ್ಲಿ ಬಿದ್ದಿರುವ ಪ್ಯಾರಾಚ್ಯೂಟ್ ಹಾಗೂ ಪೆಲೋಡ್, ಅದಕ್ಕೆ ಸಬಂಧಿಸಿದ ಸಾಧನಾಸಲಕರಣೆಗಳನ್ನು ತೆಗೆದುಕೊಂಡು ಹೋಗಲಿದೆ. ಹೀಗಾಗಿ ಈ ಬಗ್ಗೆ ಯಾರೂ ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.