ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಏರುತ್ತಿದೆ. ಒಂದಲ್ಲ ಒಂದು ಜಿಲ್ಲೆಯಲ್ಲಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಇಂದು ನಡೆದ ಸಚಿವ ಸಂಪುಟದಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದೆ. ಈ ಕುರಿತು ಕಾನೂನು ಮತ್ತು ಸಂಸದೀಯ ಖಾತೆಯ ಸಚಿವ ಹೆಚ್.ಕೆ ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟದಲ್ಲಿ ಹೊಸ ಮಸೂದೆ ಜಾರಿಗೆ ತರುವ ವಿಚಾರಕ್ಕೆ ಒಪ್ಪಿಗೆ ಸಿಕ್ಕಿದೆ.
ಮೈಕ್ರೋ ಫೈನಾನ್ಸ್ ಗಳಿಂದ ಅಮಾನವೀಯವಾಗಿ ಸಾಲ ವಸೂಲಾತಿ ನಡೆಯುತ್ತಿದೆ. ಇವತ್ತು ಸಹ ಆತ್ಮಹತ್ಯೆ ಪ್ರಕರಣಗಳು ನಡೆದಿವೆ. ಹೊಸ ಮಸೂದೆ ಜಾರಿಗೆ ತರುವ ಸಂಬಂಧ ತಾಂತ್ರಿಕ ಅಂಶಗಳ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ನಮ್ಮಲ್ಲಿನ ಕಾನೂನಿನ ಕೆಲ ಅಂಶಗಳು ಪ್ಲಾಸ್ ಆಗಲಿವೆ. ಇನ್ನು ಕೆಲವು ಮೈನಸ್ ಆಗಲಿವೆ ಎಂದಿದ್ದಾರೆ. ಹೀಗಾಗಿ ಹಿರಿಯ ಸಚಿವರೊಂದಿಗೆ ಸಿಎಂ ಸಂಜೆ 4 ಗಂಟೆಗೆ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.