ಪ್ರಜಾಸ್ತ್ರ ಸುದ್ದಿ
ಮಂಡ್ಯ(Mandaya): ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ಮುಂದುವರೆದಿದೆ. ಇದರಿಂದಾಗಿ ಒಬ್ಬರಲ್ಲ ಒಬ್ಬರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇದೀಗ ನೋಡಿದರೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ದುರಂತ ಮಂಡ್ಯದಲ್ಲಿ ನಡೆದಿದೆ. ಇಲ್ಲಿನ ವಿಸಿ ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ನಿವಾಸಿಗಳಾದ ಮಾಸ್ತಪ್ಪ(65), ಪತ್ನಿ ರತ್ನಮ್ಮ(45) ಹಾಗೂ ಮಗಳು ಲಕ್ಷ್ಮಿ(18) ಆತ್ಮಹತ್ಯೆ ಮಾಡಿಕೊಂಡು ದುರ್ದೈವಿಗಳು.
ಮಾಸ್ತಪ್ಪ ಆಟೋ ಚಾಲಕನಾಗಿದ್ದರು. ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದಿದ್ದರು. ಅದನ್ನು ತೀರಿಸುವುದು, ಮನೆ ನಿರ್ವಹಣೆ ಮಾಡುವುದು ಕಷ್ಟವಾಗಿತ್ತು. ಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ಈ ರೀತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನೊಬ್ಬರ ಮೃತದೇಹ ಪತ್ತೆ ಕಾರ್ಯ ನಡೆದಿದೆ. ಮಂಡ್ಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.