Ad imageAd image

ಮೈಕ್ರೋ ಪೈನಾನ್ಸ್, ಮಹಿಳೆಯರ ರಕ್ಷಣೆಗೆ ಕ್ರಮ: ಮಹಿಳಾ ಆಯೋಗದ ಅಧ್ಯಕ್ಷೆ ಚೌಧರಿ

Nagesh Talawar
ಮೈಕ್ರೋ ಪೈನಾನ್ಸ್, ಮಹಿಳೆಯರ ರಕ್ಷಣೆಗೆ ಕ್ರಮ: ಮಹಿಳಾ ಆಯೋಗದ ಅಧ್ಯಕ್ಷೆ ಚೌಧರಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಮೈಕ್ರೋ ಫೈನಾನ್ಸ್ ಹಾಗೂ ಚಿಟ್ ಫಂಡ್ಸ್ ಹಾವಳಿಗಳಿಂದ ಮಹಿಳೆಯರು ಅನುಭವಿಸುತ್ತಿರುವ ತೊಂದರೆಗಳನ್ನು ನಿವಾರಿಸಲು ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ(Karnataka State Commission for Women) ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ(Dr.Nagalakshmi Choudhary) ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶುಕ್ರವಾರ ನಡೆದ ಮಹಿಳಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಂತೆ ವಿಜಯಪುರ ಜಿಲ್ಲೆಯಲ್ಲಿಯೂ ಕೂಡ ಕೆಲವು ಫೈನಾನ್ಸ್ ಕಂಪನಿಗಳಿಂದ ತಡರಾತ್ರಿವರೆಗೂ ಮನೆಗೆ ಬಂದು ಕಂತು ತುಂಬಲು ಹಾಗೂ ಸಾಲ ಮರುಪಾವತಿಸುವಂತೆ ಕಿರುಕುಳ ನೀಡುತ್ತಿರುವ ಕುರಿತು ಮಹಿಳೆಯರು ದೂರನ್ನು ನೀಡಿದ್ದು, ಈ ಕುರಿತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಎಲ್ಲ ಇಲಾಖೆಗಳಲ್ಲಿ ಆತಂರಿಕ ದೂರು ಸಮಿತಿ ರಚಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕಳೆದ ಎರಡು ದಿನಗಳಿಂದ ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿದಾಗ, ಮಹಿಳೆಯರು ಮಲ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಕೆಲವು ಕಿಡಗೇಡಿಗಳು ವಿಡಿಯೋ ಚಿತ್ರೀಕರಣ ಮಾಡಲು ಯತ್ನಿಸಿ ಕಿರುಕುಳ ನೀಡುತ್ತಿದ್ದಾರೆ ಎನ್ನುವ ದೂರುಗಳು ಬಂದಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿ, ಸ್ಥಳಿಯ ಪೊಲೀಸ್ ಠಾಣಾಧಿಕಾರಿಗಳು ಮಹಿಳಾ ದೂರುದಾರರಿಗೆ ತಮ್ಮ ಸಹೋದರಿಯರಿಗೆ ತೊಂದರೆಯಾಗುತ್ತಿದೆ ಎಂದು ಸ್ಪಂದನೆ ನೀಡಬೇಕು ಎಂದರು.

ಇನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಗ್ರೂಫ್-ಡಿ ಮಹಿಳಾ ಸಿಬ್ಬಂದಿಗೆ ನಿಗದಿ ಪಡಿಸಿದ ಸಂಬಳಕ್ಕಿಂತ ಅರ್ಧ ನೀಡುತ್ತಿರುವ ದೂರು ಬಂದಿದ್ದು, ಅಂತಹ ಏಜೆನ್ಸಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ. ವಿಧುವೆ, ಒಂಟಿ ಮಹಿಳೆಯರಿಗೆ ಪಡಿತರ ಚೀಟಿ ದೊರೆಯುತ್ತಿಲ್ಲ. ನರೇಗಾ ಯೋಜನೆ ಅಡಿ ಮಹಿಳೆಯರಿಗೆ ಉದ್ಯೋಗ ದೊರೆಯುತ್ತಿಲ್ಲ. ಗ್ರಾಮಗಳಲ್ಲಿ ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಮಹಿಳೆಯರಿಂದ ದೂರುಗಳು ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ್ ಮಾರಿಹಳ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ,   ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ, ಜಿಲ್ಲಾ ಪಂಚಾಯತ ಯೋಜಾನಾ ನಿರ್ದೇಶಕ ಬಿ.ಎಸ್.ರಾಠೋಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸಿ.ಕೆ.ಚೌಹಾಣ, ಸ್ಪೀಪ್ ರಾಯಭಾರಿ ರಾಜೇಶ ಪವಾರ, ಜಿಲ್ಲಾ ಪಂಚಾಯತ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article