ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹೋರಾಟಗಾರರು, ರಾಜಕಾರಣಿಗಳ ವಿರುದ್ಧ ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾದ 43 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ. ಸಚಿವ ಸಂಪುಟ ಉಪಸಮಿತಿ ಶಿಫಾರಸು ಹಾಗೂ ಪೊಲೀಸ್, ಕಾನೂನು ಇಲಾಖೆಗಳ ಅಭಿಪ್ರಾಯ ಪಡೆದು ಸಚಿವ ಸಂಪುಟದಲ್ಲಿ 43 ಪ್ರಕರಣಗಳನ್ನು ವಾಪಸ್ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.
ಇದರಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ, ರಾಜ್ಯ ಸಚಿವ ಎಂ.ಸಿ ಸುಧಾಕರ್, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ, ಮಾಜಿ ಸಚಿವರಾದ ಎಂ.ಪಿ ರೇಣುಕಾಚಾರ್ಯ, ಬಿ.ಆರ್ ಯಾವಗಲ್, ಪರಿಷತ್ ಸದಸ್ಯ ಸಿ.ಟಿ ರವಿ, ಶಾಸಕ ಯು.ಬಿ ಬಣಕಾರ್, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಅನಿಲ್ ಬೆನಕೆ, ಬಿ.ಎಂ ಸುಕಮಾರ್ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ ಹಲವು ರಾಜಕಾರಣಿಗಳು, ರೈತಪರ, ಕನ್ನಡಪರ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯಲು ಒಪ್ಪಿಗೆ ನೀಡಿದೆ.