ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಯೋಜನಾ ಮತ್ತು ಸಾಂಖಿಕ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ(62) ಅವರು ಭಾನುವಾರ ನಸುಕಿನಜಾವ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಂಡಿ ಚಿಪ್ಪು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಶ್ವಾಸಕೋಶದ ಸೋಂಕು ತಗುಲಿತ್ತು. ಹೀಗಾಗಿ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು, ಬಳಗದವರು, ಸ್ನೇಹಿತರು, ಕಾರ್ಯಕರ್ತರನ್ನು ಅಗಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಚಿತ್ರದುರ್ಗದ ಹಿರಿಯೂರಗೆ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗಲಾಗುತ್ತಿದೆ. ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಸಂಜೆ ಜೈನ್ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲಾಗುತ್ತಿದೆ.




