Ad imageAd image

ಎಚ್ಎಂಪಿವಿ ಸೋಂಕಿನ ಬಗ್ಗೆ ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

Nagesh Talawar
ಎಚ್ಎಂಪಿವಿ ಸೋಂಕಿನ ಬಗ್ಗೆ ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಾಜ್ಯದಲ್ಲಿ ಎಚ್ಎಂಪಿವಿ ಸೋಂಕು ಇಬ್ಬರು ಮಕ್ಕಳಲ್ಲಿ ಕಾಣಿಸಿಕೊಂಡಿದೆ. ಈ ಮೂಲಕ ಜನರಲ್ಲಿ ಆತಂಕ ಮೂಡಿದೆ. ಚೀನಾದಲ್ಲಿ ಕಾಣಿಸಿಕೊಂಡಿರುವ ಈ ಸೋಂಕು ಕೋವಿಡ್ 19 ಮಾದರಿಯ ರೀತಿಯ ಲಕ್ಷಣಗಳನ್ನೇ ಹೊಂದಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇದು ಹೊಸದಲ್ಲಿ 2001ರಿಂದಲೇ ನಮ್ಮ ದೇಶದಲ್ಲಿದೆ. ಇದರಿಂದ ಯಾವುದೇ ತೊಂದರೆಯಿಲ್ಲ. ಜನರು ಆತಂಕ ಪಡಬೇಡಿ ಎಂದಿದ್ದಾರೆ.

ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಐಸಿಎಂಆರ್ ಸೂಚನೆಗಳನ್ನು ಪಾಲಿಸುತ್ತೇವೆ. ಆದರೆ, ಈ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ಸಾಮಾನ್ಯವಾಗಿ ಐಎಲ್ಐ ಪ್ರಕರಣಗಳಲ್ಲಿ ಶೇಕಡ 1ರಷ್ಟು ಜನರಲ್ಲಿ ಈ ವೈರಸ್ ಕಂಡು ಬರುತ್ತದೆ. ಇಂತಹ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಪರೀಕ್ಷಿಸಿದಾಗ ಈ ವೈರಸ್ ಪತ್ತೆಯಾಗಿದೆ. 3 ತಿಂಗಳ ಮಗಳು ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. 8 ತಿಂಗಳ ಮಗು ಇವತ್ತು ಅಥವ ನಾಳೆ ಬಿಡುಗಡೆಯಾಗುತ್ತದೆ ಅಂತಾ ಹೇಳಿದರು.

ನ್ಯುಮೋನಿಯಾ, ಉಸಿರಾಟದ ಸಮಸ್ಯೆ ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳಿಗೆ ಹಾಗೂ ಹಿರಿಯರಿಗೆ ಒಂದಿಷ್ಟು ಸಮಸ್ಯೆಯಾಗುತ್ತೆ. ಅದನ್ನು ಹೊರತು ಪಡಿಸಿ ತುಂಬಾ ಆತಂಕ ಪಡುವ ಅಗತ್ಯವಿಲ್ಲ. ಈ ರೀತಿಯ ಸಮಸ್ಯೆ ಇರುವವರು ಸ್ವಲ್ಪ ಎಚ್ಚರಿಕೆ ವಹಿಸಿಬೇಕು ಎಂದರು.

WhatsApp Group Join Now
Telegram Group Join Now
Share This Article