ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮುಸ್ಲಿಮರಿಗೆ ವೋಟು ಇಲ್ಲದಂತೆ ಮಾಡಬೇಕು ಎಂದು ಹೇಳಿದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಸಚಿವ ಹೆಚ್.ಸಿ ಮಹಾದೇವಪ್ಪ(Dr H C Mahadevappa) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಧರ್ಮದ ಹೆಸರಲ್ಲಿ ರಾಜಕೀಯ ದ್ವೇಷ ಹರಡುವ ಇಂತವರು ತಮ್ಮ ಕೆಟ್ಟ ಪ್ರವೃತ್ತಿಗೆ ಕಡಿವಾಣ ಹಾಕಬೇಕು ಎಂದಿದ್ದಾರೆ.
ಅಷ್ಟೊಂದು ಹೋರಾಟ ನಡೆಸಿ ಬಾಬಾಸಾಹೇಬರು ಒಂದು ಮತ ಒಂದು ಮೌಲ್ಯವನ್ನು ಜಾರಿ ಮಾಡಿದ ಕಾರಣವನ್ನು ದಲಿತರು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರು ಇನ್ನಾದರೂ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳುವ ಮೂಲಕ ಸ್ವಾಮೀಜಿಯ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿದ್ದಾರೆ.