Ad imageAd image

ಮೋದಿ, ನಿರ್ಮಲಾ, ಕುಮಾರಸ್ವಾಮಿ ರಾಜೀನಾಮೆ ಕೇಳಿ: ಸಚಿವೆ ಹೆಬ್ಬಾಳ್ಕರ್

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು ನೀಡಿದ್ದು

Nagesh Talawar
ಮೋದಿ, ನಿರ್ಮಲಾ, ಕುಮಾರಸ್ವಾಮಿ ರಾಜೀನಾಮೆ ಕೇಳಿ: ಸಚಿವೆ ಹೆಬ್ಬಾಳ್ಕರ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಮುಡಾ(MUDA Case) ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ತಿರುಗೇಟು ನೀಡಿದ್ದು, ಮೊದಲು ಪ್ರಧಾನಿ ಮೋದಿ(Modi) ಕೇಂದ್ರ ಸಚಿವರಾದ(HDK) ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್ ರಾಜೀನಾಮೆ ಕೇಳಿ ಎಂದಿದ್ದಾರೆ. ಶನಿವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶ ಪಾಲಿಸಿ ಮೊದಲು ಕೇಂದ್ರ ಹಣಕಾಸು ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

ಚುನಾವಣಾ ಬಾಂಡ್ ನ 6 ಸಾವಿರ ಕೋಟಿ ರೂಪಾಯಿ ಹಗರಣದಲ್ಲಿ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ವಿರುದ್ಧ ಎಫ್ಐಆರ್(FIR) ದಾಖಲಿಸುವಂತೆ ಹೇಳಿದೆ. ಇದನ್ನು ಮಾಧ್ಯಮದವರು ಮರೆಯಬಾರದು. ಇದರಲ್ಲಿ ಭಾಗಿಯಾದ ಪ್ರಧಾನಿ ಮೋದಿ ರಾಜೀನಾಮೆಗೆ ಒತ್ತಾಯಿಸಲಿ. ಬಿಜೆಪಿಯೇತರ ಸರ್ಕಾರ ಇರುವ ಕಡೆಯಲ್ಲಿ ಅಸ್ಥಿರಗೊಳಿಸಲು ಒಂದಲ್ಲ ಒಂದು ಅಸ್ತ್ರ ಮಾಡಿಕೊಳ್ಳುತ್ತಿದೆ. ಕಾನೂನು ಪ್ರಕ್ರಿಯೆ ನಡೆಯಲಿ. ನಾವು ಯಾವುದಕ್ಕೂ ಹಿಂಜರಿಯುವುದಿಲ್ಲವೆಂದು ಸಿಎಂ ಅವರೆ ಹೇಳಿದ್ದಾರೆ ಎಂದು ಹೇಳಿದರು.

WhatsApp Group Join Now
Telegram Group Join Now
Share This Article