Ad imageAd image

ವಿಜಯಪುರ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಚಿವೆ ಹೆಬ್ಬಾಳ್ಕರ್ ಅಸಮಾಧಾನ

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರ ಸಂಬಂಧ ಡಿಸೆಂಬರ್ 10ರಂದು ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ, ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ.

Nagesh Talawar
ವಿಜಯಪುರ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಚಿವೆ ಹೆಬ್ಬಾಳ್ಕರ್ ಅಸಮಾಧಾನ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ(2A Reservation) ನೀಡುವ ವಿಚಾರ ಸಂಬಂಧ ಡಿಸೆಂಬರ್ 10ರಂದು ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ, ಜಯಮೃತ್ಯುಂಜಯ ಸ್ವಾಮೀಜಿ(Jaya Mrityunjaya Swamiji) ಕರೆ ನೀಡಿದ್ದಾರೆ. ಈ ಸಂಬಂಧ ಇಂದು ನಗರದಲ್ಲಿ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸ್ವಾಮೀಜಿಗಳಿಗೆ ನಾವು ಗೌರವ ನೀಡುತ್ತೇವೆ. ಆದರೆ, ಸರ್ಕಾರಕ್ಕೆ ಮುಜುಗರ ತರುವುದು ಬೇಡ. ಸರ್ಕಾರದಲ್ಲಿದ್ದರೂ ಸಮಾಜದ ಪರವಾಗಿ ಹೋರಾಟದಲ್ಲಿ ಭಾಗಿಯಾಗಿದ್ದೀವಿ ಎಂದರು.

ಯಾವುದೇ ಸರ್ಕಾರವಿದ್ದರೂ ನಾವು ಹೋರಾಟ ಮಾಡಿದ್ದೇವೆ. ಪಂಚಮಸಾಲಿ ಸಮಾಜಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮಾತನಾಡಿದ್ದೇವೆ. ಆದರೆ, ಸ್ವಾಮೀಜಿಗಳು ಅಧಿವೇಶನದ ವೇಳೆ ಸರ್ಕಾರಕ್ಕೆ ಮುಜುಗರ ತರುವ ಹೋರಾಟ ಮಾಡಬಾರದು. ಅವರ ಹೋರಾಟ ಮರ್ಯಾದೆಯ ಹಾದಿಯಲ್ಲಿರಲಿ ಎನ್ನುವ ಮೂಲಕ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಹೊರ ಹಾಕಿದ್ದಾರೆ.

WhatsApp Group Join Now
Telegram Group Join Now
Share This Article