Ad imageAd image

ಬೆಳಗಾವಿ ಅಧಿನವೇಶನಕ್ಕೆ ಬರಾಕ್ ಒಬಾಮಾ ಕರೆಸುವ ಉದ್ದೇಶ: ಸಚಿವ ಹೆಚ್.ಕೆ ಪಾಟೀಲ

ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ ತುಂಬಿದೆ. ಹೀಗಾಗಿ ಶತಮಾನೋತ್ಸವ ಕಾರ್ಯಕ್ರಮ ನಡೆಸುವ

Nagesh Talawar
ಬೆಳಗಾವಿ ಅಧಿನವೇಶನಕ್ಕೆ ಬರಾಕ್ ಒಬಾಮಾ ಕರೆಸುವ ಉದ್ದೇಶ: ಸಚಿವ ಹೆಚ್.ಕೆ ಪಾಟೀಲ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಳಗಾವಿ(Belagavi): ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧಿ(Mahatma Gandhi) ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷ ತುಂಬಿದೆ. ಹೀಗಾಗಿ ಶತಮಾನೋತ್ಸವ ಕಾರ್ಯಕ್ರಮ ನಡೆಸುವ ಮೂಲಕ ಮನೆ ಮನೆಗೆ ಗಾಂಧಿ ತತ್ವ ಸಿದ್ಧಾಂತಗಳನ್ನು ತಲುಪಿಸುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಹಾಗೂ ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿರುವ ಹೆಚ್.ಕೆ ಪಾಟೀಲ ಹೇಳಿದರು.

ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 2ರಿಂದ ಈ ವರ್ಷಪೂರ್ತಿ ಶತಮಾನೋತ್ಸವ ಆಚರಿಸಲಾಗುವುದು. ಬೆಳಗಾವಿಯಲ್ಲೇ ಜಂಟಿ ಅಧಿವೇಶನ ನಡೆಸಲಾಗುತ್ತಿದ್ದು, ಇದಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್(Barack Obama) ಒಬಾಮಾ ಅವರನ್ನು ಕರೆಸುವ ಉದ್ದೇಶವಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ. ಶತಮಾನೋತ್ಸವ ಕಾರ್ಯಕ್ರಮಕ್ಕೆ ಸರ್ಕಾರದಿಂದ 25 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದರು. ಈ ವೇಳೆ ಸಮಿತಿಯ ಗೌರವ ಅಧ್ಯಕ್ಷರಾದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸದಸ್ಯರಾದ ಪರಿಷತ್ ಮಾಜಿ ಸಭಾಪತಿ ಬಿ.ಎಲ್ ಶಂಕರ್, ಶಾಸಕ ಆಸಿಫ್ ಸೇಠ್, ಎನ್.ಆರ್ ವಿಶುಕುಮಾರ್ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article