ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಪಟ್ಟಣದಲ್ಲಿ ಶಾಸಕ ಅಶೋಕ ಮನಗೂಳಿಯವರ ಇಚ್ಛಾಶಕ್ತಿಯಿಂದ ನಿರ್ಮಾಣಗೊಂಡಿರುವ ಟ್ರೀ ಪಾರ್ಕ್ ಜುಲೈ 28, ಸೋಮವಾರ ಉದ್ಘಾಟನೆಯಾಗುತ್ತಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಇದನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸಂಜೆ 6 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2 ಕೋಟಿ ರೂಪಾಯಿ ವೆಚ್ಚದಲ್ಲಿ ಟ್ರೀ ಪಾರ್ಕ್ ನಿರ್ಮಾಣಗೊಂಡಿದೆ. ಇದಕ್ಕೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನ ಎಂದು ಹೆಸರಿಡಲಾಗಿದೆ. ಇದರ ಜೊತೆಗೆ ಬವಸೇಶ್ವರ ವೃತ್ತದಿಂದ ವಿವೇಕಾನಂದ ವೃತ್ತ ಹಾಗೂ ವಿವೇಕಾನಂದ ವೃತ್ತದಿಂದ ಗೋಲಗೇರಿ ರಸ್ತೆಯವರೆಗೆ ಹೊಸ ವಿದ್ಯುತ್ ಕಂಬಗಳ ಜೋಡಣೆ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಲಾಗಿದೆ.