Ad imageAd image

ಸಿಂದಗಿ ತಾ.ಪಂ ಇಒ ಅಮಾನತಿಗೆ ಸಚಿವ ಜಮೀರ್ ಅಹ್ಮದ್ ಸೂಚನೆ

ವಕ್ಫ್ ಆಸ್ತಿ ಖಾತೆ ಬದಲಾವಣೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಜಿಲ್ಲೆಯ ಪ್ರಗತಿ ಕುಂಠಿತವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ

Nagesh Talawar
ಸಿಂದಗಿ ತಾ.ಪಂ ಇಒ ಅಮಾನತಿಗೆ ಸಚಿವ ಜಮೀರ್ ಅಹ್ಮದ್ ಸೂಚನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ವಕ್ಫ್ ಆಸ್ತಿ ಖಾತೆ ಬದಲಾವಣೆಯಲ್ಲಿ ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ವಿಜಯಪುರ ಜಿಲ್ಲೆಯ ಪ್ರಗತಿ ಕುಂಠಿತವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್, ಮುಂದಿನ ಒಂದು ತಿಂಗಳೊಳಗಾಗಿ ವಕ್ಫ್ ಖಾತೆ ಬದಲಾವಣೆ, ಪ್ಲ್ಯಾಗಿಂಗ್ ಸೇರಿದಂತೆ ಸೂಕ್ತ ಪ್ರಗತಿ ಸಾಧಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಾದ್ಯಂತ ಇರುವ 2,148 ಆಸ್ತಿಗಳ ಪೈಕಿ 109 ಆಸ್ತಿಗೆ ಸಂಬಂಧಿಸಿದಂತೆ ಮಾತ್ರ ಖಾತೆ ಬದಲಾವಣೆ ಮಾಡಲಾಗಿದೆ. 2,039 ಖಾತೆ ಬದಲಾವಣೆ ಬಾಕಿ ಇದೆ. ಶೇ.5.07ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಈ ಪ್ರಮಾಣ ಹೆಚ್ಚಾಗಿದೆ ಎಂದರು.

ಜಿಲ್ಲೆಯ 108 ಆಸ್ತಿಗಳ ಪ್ಲ್ಯಾಗಿಂಗ್ ಸಹ ಬಾಕಿ ಉಳಿದಿದ್ದು, ಜಿಲ್ಲೆಯ ವಕ್ಫ್ ಅಧಿಕಾರಿಗಳು ಸಹ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸೂಕ್ತ ಸಮನ್ವಯತೆ ಸಾಧಿಸಿಕೊಂಡು ಖಾತೆ ಬದಲಾವಣೆ ಹಾಗೂ ಪ್ಲ್ಯಾಗಿಂಗ್ ಕಾರ್ಯದ ಅನುಸರಣೆ ಮಾಡಬೇಕು. ಮುಂದಿನ 45 ದಿನಗಳೊಳಗಾಗಿ ಖಾತೆ ಬದಲಾವಣೆ ಹಾಗೂ ಪ್ಲ್ಯಾಗಿಂಗ್ ಕಾರ್ಯ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಖಾತೆ ಬದಲಾವಣೆ ಸಂದರ್ಭದಲ್ಲಿ ಮಾತ್ರ ಕೆಲವೊಂದು ತೊಂದರೆಗಳು ಬರಬಹುದು. ಖಾತೆ ಬದಲಾವಣೆ ನಂತರವೂ ಪ್ಲ್ಯಾಗಿಂಗ್ ಮಾಡದಿರುವುದು ಅಧಿಕಾರಿಗಳ ನಿರ್ಲಕ್ಷ್ಯ ತೋರಿಸುತ್ತಿದೆ. ಇದನ್ನು ನಾನು ಸಹಿಸುವುದಿಲ್ಲ. ಇಂದಿನ ಸಭೆಗೆ ಗೈರಾದ ಸಿಂದಗಿ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಮು ಅಗ್ನಿ ಅವರನ್ನು ಅಮಾನತ್ತುಗೊಳಿಸುವಂತೆ ಸೂಚಿಸಿದ ಅವರು, ವಿವಿಧ ಸಚಿವರು, ಶಾಸಕರ ಸಭೆ, ಕೆಡಿಪಿ ಸಭೆಗಳಿಗೆ ಗೈರ ಹಾಜರಾಗುವ ಅಧಿಕಾರಿಗಳ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಖಾತೆ ಸಚಿವ ಶಿವಾನಂದ ಪಾಟೀಲ ಮಾತನಾಡಿದರು. ಸಭೆಯಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ವಿಧಾನಪರಿಷತ್ ಸದಸ್ಯ ಅಬ್ದುಲ ಜಬ್ಬಾರ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅನ್ವರಬಾಶಾ,ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article