ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಆಪ್ತ ಸರ್ಫರಾಜ್ ಖಾನ್, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ವಿರುದ್ಧ ಮಾಡಿದ್ದ ಗಂಭೀರ ಆರೋಪ ಸಂಬಂಧ ಪ್ರತಿಭಟನೆ ನಡೆಸಲಾಗಿದೆ. ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋರಾಟ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಸರ್ಫರಾಜ್ ಖಾನ್ ರೂಪೇಶ್ ರಾಜಣ್ಣ ವಿರುದ್ಧ ಆರೋಪಿಸಿದ್ದರು. ಈ ಸಂಬಂಧ ದಾಖಲೆ ಕೇಳಲು ಬಂದ ವೇಳೆ ಗಲಾಟೆ ನಡೆದಿದೆ.