ಪ್ರಜಾಸ್ತ್ರ ಸುದ್ದಿ
ಮೈಸೂರು(Mysore): ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಕೇಂದ್ರ ಸಚಿವ, ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿಯನ್ನು ಕರಿಯ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಕರೆದಿದ್ದು, ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಬಿಜೆಪಿ, ಜೆಡಿಎಸ್ ನಾಯಕರು ಕಿಡಿ ಕಾರುತ್ತಿದ್ದಾರೆ. ಇದಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆ ಕೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರನ್ನು ಕರಿಯ ಎಂದು ಕರೆದಿದ್ದಕ್ಕೆ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.
ಕುಮಾರಸ್ವಾಮಿಯವರನ್ನು, ಜೆಡಿಎಸ್ ಮುಖಂಡರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ನಾನು ಮೊದಲಿನಿಂದಲೂ ಅವರನ್ನು ಕರಿಯಣ್ಣ ಎನ್ನುತ್ತೇನೆ. ಅವರು ನನ್ನನ್ನು ಕುಳ್ಳ ಎನ್ನುತ್ತಾರೆ ಎಂದಿದ್ದಾರೆ. ಜಮೀರ್ ಹೇಳಿಕೆಗೆ ಬಿಜೆಪಿ ಕೇಂದ್ರ ನಾಯಕರು ಕಿಡಿ ಕಾರಿದ್ದಾರೆ. ಈಗ ಕ್ಷಮೆ ಕೇಳಿದ್ದು, ಇದು ಇಲ್ಲಿಗೆ ನಿಲ್ಲುತ್ತಾ ಅಥವ ಬೇರೆ ಏನಾದರೂ ಸ್ವರೂಪ ಪಡೆದುಕೊಳ್ಳುತ್ತಾ ಕಾದು ನೋಡಬೇಕು.