ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರೆಂಟಿಗಳಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ(satish jarkiholi) ನೀಡಿರುವ ಹೇಳಿಕೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಗ್ಯಾರೆಂಟಿ ಯೋಜನೆಗಳನ್ನು ಪರಿಷ್ಕರಣೆ ಮಾಡುವ ಅಗತ್ಯವಿದ್ದು, ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಬೇಕು. ಶ್ರೀಮಂತರನ್ನು ಹೊರಗಿಡಬೇಕು ಎಂದು ಹೇಳಿದ್ದಾರೆ.
ವರಿಷ್ಠರನ್ನು ಭೇಟಿಯಾದಾಗ ಗ್ಯಾರೆಂಟಿ(guarantee) ಯೋಜನೆಗಳನ್ನು ನಿಲ್ಲಿಸಿ ಎಂದು ಹೇಳಿಲ್ಲ. ಬಡವರಿಗೆ ಸಿಗಬೇಕು. ಶ್ರೀಮಂತರು ಬೇಡ. ಈ ಬಗ್ಗೆ ಎಲ್ಲೆಡೆ ಚರ್ಚೆಯಾಗಿದೆ. ಇದರಿಂದಾಗಿ ವಾರ್ಷಿಕ 10 ಸಾವಿರ ಕೋಟಿ ಉಳಿಯಲಿದೆ. ಪರಿಷ್ಕರಣೆಯಿಂದ ಸರ್ಕಾರದ ಜನಪ್ರಿಯತೆ ಹೆಚ್ಚಾಗುತ್ತೆ. ಈ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ.
ಚುನಾವಣೆ ಪೂರ್ವದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ ಮಾತುಗಳಿಗೆ ಇದು ವಿರುದ್ಧವಾಗಿದೆ. ಉಚಿತ, ಖಚಿತ, ನಿಶ್ಚಿತ. ಇದು ನಿನಗೂ ಫ್ರೀ, ಅವನಿಗೂ ಫ್ರೀ. ಎಲ್ಲ ಹೆಣ್ಮಕ್ಕಳಿಗೂ ಉಚಿತ ಬಸ್ ಪ್ರಯಾಣ, ರೇಷನ್ ಕಾರ್ಡ್ ನಲ್ಲಿ ಮಹಿಳೆ ಮುಖ್ಯಸ್ಥೆಯಾಗಿದ್ದರೆ ಗೃಹಲಕ್ಷ್ಮಿ ಯೋಜನೆ ಎಂದಿದ್ದು, ಅದರಂತೆ ಹಣ ಹಾಕಲಾಗುತ್ತಿದೆ. ಈಗ ನೋಡಿದರೆ ಸಚಿವರೆ ಈ ರೀತಿ ಹೇಳ್ತಿರುವುದು ಜನರಲ್ಲಿ ಪ್ರಶ್ನೆ ಮೂಡಿಸಿದೆ.