ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚನ ಮೂಡಿಸಿರುವುದು ಹನಿ ಟ್ರ್ಯಾಪ್ ಪ್ರಕರಣ. ಸ್ವತಃ ಸಚಿವರೆ ಈ ಬಗ್ಗೆ ಸದನದಲ್ಲಿ ಹೇಳಿದ್ದಾರೆ. ಸಚಿವ ಕೆ.ಎನ್ ರಾಜಣ್ಣಗೆ ಎರಡು ಬಾರಿ ಹನಿಟ್ರ್ಯಾಪ್ ಮಾಡಲು ಪ್ರಯತ್ನಿಸಿದ್ದು, ಕಪಾಳಕ್ಕೆ ಹೊಡೆದಿದ್ದೇನೆ ಎಂದಿದ್ದಾರೆ. ಇದೀಗ ಎರಡು ದಿನಗಳ ಬಳಿಕ ನಾನು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದಿದ್ದಾರೆ.
ನನ್ನನ್ನು ಮಾತ್ರವಲ್ಲ 48 ರಾಜಕೀಯ ನಾಯಕರಿಗೆ ಹನಿ ಟ್ರ್ಯಾಪ್ ಮಾಡಲಾಗಿದೆ ಎಂದಿದ್ದಾರೆ. ರಮೇಶ್ ಜಾರಕಿಹೊಳಿ, ಪ್ರಜ್ವಲ್ ರೇವಣ್ಣನಂತೆ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ಸಿಎಂ ಜೊತೆ ಮಾತನಾಡಿದ್ದು, ನಿನಗೆ ಹೇಗೆ ಅನಿಸುತ್ತದೆಯೋ ಹಾಗೇ ಮಾಡು ಅಂದಿದ್ದಾರೆ. ಈ ರೀತಿಯಾಗಿ ಸಾರ್ವಜನಿಕವಾಗಿ ತೇಜೋವಧೆ ಮಾಡುವುದು ಸರಿಯಲ್ಲ. ಈ ಸಂಬಂಧ ದೂರು ನೀಡುತ್ತೇನೆ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.