Ad imageAd image

ವಿಜಯಪುರ: ಆನಂದ್ ಮಹಲ್ ಗೆ ಸಚಿವ ಕೃಷ್ಣ ಭೈರೇಗೌಡ ಭೇಟಿ

Nagesh Talawar
ವಿಜಯಪುರ: ಆನಂದ್ ಮಹಲ್ ಗೆ ಸಚಿವ ಕೃಷ್ಣ ಭೈರೇಗೌಡ ಭೇಟಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಕಂದಾಯ ಖಾತೆ ಸಚಿವರಾದ ಕೃಷ್ಣ ಭೈರೇಗೌಡ ಅವರು ನಗರದ ಆನಂದ ಮಹಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶನಿವಾರ ಬೆಳಿಗ್ಗೆ ಐತಿಹಾಸಿಕ ಆನಂದ ಮಹಲ್‌ಗೆ ಭೇಟಿ ನೀಡಿ ಕಟ್ಟಡವನ್ನು ಸಮಗ್ರವಾಗಿ ವೀಕ್ಷಣೆ ಮಾಡಿದ ಅವರು, ಆನಂದ ಮಹಲ್ ಕಂದಾಯ ಇಲಾಖೆಗೆ ಒಳಪಟ್ಟಿರುವುದರಿಂದ ಈ  ಐತಿಹಾಸಿಕ ಕಟ್ಟಡವನ್ನು ಸಾರ್ವಜನಿಕ ಉಪಯೋಗಕ್ಕಾಗಿ ಬಳಸಿಕೊಂಡು, ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಪ್ರವಾಸೋದ್ಯಮಕ್ಕೆ ಪೂರಕವಾದ ಚಟುವಟಿಕೆಗಳು ಸೇರಿದಂತೆ ಕೈಗೊಳ್ಳಬಹುದಾದ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಉಪಯೋಗ ಮಾಡಿಕೊಳ್ಳುವುದರ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಅಮೀನ ಹುಲ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article