ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ(Hubballi): ಬಿಜೆಪಿ ಆಪರೇಷನ್ ಕಮಲ ಮಾಡುವ ಮೂಲಕ ನಮ್ಮ ಸರ್ಕಾರ ಕೆಡವಲು ಕಳೆದ 16 ತಿಂಗಳಿಂದ ಪ್ರಯತ್ನಿಸುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಆಪರೇಷನ್ ಕಮಲ ಮಾಡುವುದರಲ್ಲಿ ಬಿಜೆಪಿಗರು ನಿಸ್ಸಿಮರು. ಆದರೆ, ನಮಗೆ ಜನ ಬೆಂಬಲವಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಬಿಜೆಪಿಯವರು 100 ಸ್ಮಾರ್ಟ್ ಸಿಟಿ ಮಾಡುವುದಾಗಿ ಹೇಳಿದರು. ಏನಾಯ್ತು? ಇವರು ಕಟ್ಟಿದ ಕಟ್ಟಡಗಳು 10 ವರ್ಷದೊಳಗೆ ಬಿದ್ದು ಹೋಗುತ್ತಿವೆ. ಇದಕ್ಕೆ ಪ್ರಧಾನಿ ಮೋದಿಯವರು ಉತ್ತರಿಸಲಿ. ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಬರೀ ಸುಳ್ಳುಗಳನ್ನೇ ಹೇಳುತ್ತಾ ಹೋಗುತ್ತಾರೆ. ನಮ್ಮ ಸರ್ಕಾರ ಸುಭದ್ರವಾಗಿದೆ. ಬಿಜೆಪಿಯವರು ಏನೇ ಪ್ರಯತ್ನಿಸಿದರೂ ಕೆಡವಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.