ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಹತ್ತಿರ ನಡೆದಿದೆ. ಕಾರಿನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ ಪ್ರಯಾಣಿಸುತ್ತಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿಗೆ ಹೊರಟಿದ್ದರು. ನಾಯಿ ಅಡ್ಡ ಬಂದಿದೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಆಸ್ಪತ್ರೆಗೆ ಎಸ್ಪಿ ಭೇಟಿ ನೀಡಿದ್ದಾರೆ. ಇನ್ನು ಸಚಿವೆ ಹೆಬ್ಬಾಳ್ಕರ್ ತಾಯಿ ಹಾಗೂ ಸಹೋದರಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.