ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕನಿಗೆ ಚಾಕು ಇರಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಬೈಕ್ ನಲ್ಲಿ ಬಂದ ಇಬ್ಬರು ಕಾರು ಚಾಲಕ ಬಸವಂತ ಕಡೋಲ್ಕರ್(32) ಅವರ ಎದೆಗೆ, ಭುಜ ಸೇರಿ ಇತರೆ ಕಡೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿ.ಶಂಕರಾನಂದ ಮಾರ್ಗದಲ್ಲಿ ಕಾರು ನಿಲ್ಲಿಸಿ ಬಸವಂತ ನಿಂತಿದ್ದರು, ಬೈಕ್ ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಬಳಿಕ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಪರಿಚಿತರಿಂದಲೇ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.




