Ad imageAd image

ವಿಜಯಪುರ: ಧ್ವಜಾರೋಹಣ ನೆರವೇರಿಸಿದ ಸಚಿವ ಎಂ.ಬಿ.ಪಾಟೀಲ

Nagesh Talawar
ವಿಜಯಪುರ: ಧ್ವಜಾರೋಹಣ ನೆರವೇರಿಸಿದ ಸಚಿವ ಎಂ.ಬಿ.ಪಾಟೀಲ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): 79ನೇ ಸ್ವಾತಂತ್ರೋತ್ಸವವನ್ನು ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಆಚರಣೆ ಮಾಡಲಾಯಿತು. ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಅವರು ಧ್ವಜಾರೋಹಣ ನೆರವೇರಿಸಿದರು. ನಂತರ ಧ್ವಜವಂದನೆ ಸ್ವೀಕರಿಸಿದರು.

ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿದರು. ಪರೇಡ್ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪಥಸಂಚಲನದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ, ಐಆರ್ ಬಿ ಪೊಲೀಸ್ ಪಡೆ, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಸೈನಿಕ ಶಾಲೆ, ಎನ್ ಸಿಸಿ ಸೀನಿಯರ್ ಡಿವಿಜನ್, ಪೊಲೀಸ್ ವಾದ್ಯ ವೃಂದ ಸೇರಿದಂತೆ ಹಾಗೂ ವಿವಿಧ ಶಾಲಾ ಕಾಲೇಜು ತಂಡಗಳು ಭಾಗವಹಿಸಿದ್ದವು.

ಸಚಿವರು  ಸ್ವಾತಂತ್ರೋತ್ಸವ ದಿನಾಚರಣೆಯ  ಸಂದೇಶವನ್ನು ನೀಡಿದರು. ವಿವಿಧ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಸಮಾರಂಭದಲ್ಲಿ ಸಂಸದ ರಮೇಶ ಜಿಗಜಿಣಗಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಎನ್.ರವಿಕುಮಾರ್, ಪರಿಷತ್ತಿನ ಶಾಸಕ ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ ಮುಶ್ರೀಪ್, ಮೇಯರ್ ಎಸ್.ಎಂ.ಕರಡಿ, ಉಪ ಮೇಯರ್ ಸುಮಿತ್ರಾ ಜಾಧವ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

WhatsApp Group Join Now
Telegram Group Join Now
Share This Article