ಪ್ರಜಾಸ್ತ್ರ ಸುದ್ದಿ
ತುಮಕೂರು(Tumkaoru): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಒಬ್ಬರಾದ ಮೇಲೆ ಒಬ್ಬರು ಡಿನ್ನರ್ ಸಭೆ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅಸಮಾಧನಗೊಂಡಿದ್ದು, ಹೈಕಮಾಂಡ್ ಗೆ ದೂರು ನೀಡಿದ್ದಾರೆ ಎನ್ನುವ ವಿಚಾರಕ್ಕೆ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪರಿಶಿಷ್ಟ ಜಾತಿ, ಪಂಗಡದ ಮಕ್ಕಳಿಗೆ ವಿದ್ಯಾರ್ಥಿ ವೇತನ ಸಿಗುತ್ತಿಲ್ಲ. ಮ್ಯಾನೇಜ್ ಮೆಂಟ್ ಕೋಟಾದಡಿ ವಸತಿ ನಿಲಯ ಪ್ರವೇಶ ಸಿಗುತ್ತಿಲ್ಲ. ಈ ರೀತಿಯ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆ ನಡೆಸಲಾಗುತ್ತಿದೆ. ಸಭೆ ಮಾಡಬೇಡಿ ಎಂದರೆ ಅವರು ಪರಿಶಿಷ್ಟ ಸಮುದಾಯದ ವಿರೋಧಿಗಳೇ ಎಂದು ಪ್ರಶ್ನಿಸಿದರು.
ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ನಡೆಸುವ ಸಭೆಗೆ ರಾಜಕೀಯ ಲೇಪನ ಕೊಟ್ಟು ವಿರೋಧಿಸುವುದು ಸರಿಯಲ್ಲ. ಯಾರೂ ಡಿ.ಕೆ ಶಿವಕುಮಾರ್ ಅವರ ಆಸ್ತಿ ಬರೆಸಿಕೊಂಡಿಲ್ಲ ಅವರು ಬೇಜಾರಾಗಲು. ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ಗೊಂದಲ ಆಗಿದೆ. ಹೀಗಾಗಿ ಹೈಕಮಾಂಡ್ ಸಭೆ ಮುಂದೂಡುವಂತೆ ಸೂಚಿಸಿದೆ. ರದ್ದಾಗಿಲ್ಲ ಎಂದರು.