Ad imageAd image

ಕಬ್ಬು ಬೆಳೆಗಾರರಿಗೆ 300 ಕೋಟಿ ರೂಪಾಯಿ ಬಿಡುಗಡೆ: ಸಚಿವ ಶಿವಾನಂದ ಪಾಟೀಲ

Nagesh Talawar
ಕಬ್ಬು ಬೆಳೆಗಾರರಿಗೆ 300 ಕೋಟಿ ರೂಪಾಯಿ ಬಿಡುಗಡೆ: ಸಚಿವ ಶಿವಾನಂದ ಪಾಟೀಲ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರ 2025-26ನೇ ಸಾಲಿನಲ್ಲಿ ಘೋಷಣೆ ಮಾಡಿದ್ದ ಪ್ರತಿ ಟನ್ ಗೆ 50 ಆರೋಪಿ ಆರ್ಥಿಕ ನೆರವಿನ ಮೊತ್ತದ 300 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಕಳೆದ ನವೆಂಬರ್ 8ರಂದು ವಿಧಾನಸೌದದಲ್ಲಿ ನಡೆದ ಕಬ್ಬು ಬೆಳೆಗಾರರ ಹಾಗೂ ಕಾರ್ಖಾನೆ ಮಾಲೀಕರ ಸಭೆಯಲ್ಲಿ ಪ್ರತಿ ಟನ್ ಕಬ್ಬಿಗೆ ಎಫ್ಆರ್ ಪಿ ಮೇಲೆ 100 ರೂಪಾಯಿ ಆರ್ಥಿಕ ನೆರವು ನೀಡುವ ನಿರ್ಧಾರ ಪ್ರಕಟಿಸಲಾಗಿತ್ತು. ಇದರಲ್ಲಿ ಸರ್ಕಾರ 50 ರೂಪಾಯಿ, ಕರ್ಖಾನೆ 50 ರೂಪಾಯಿ ನೀಡುವ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಈಗ ರಾಜ್ಯ ಸರ್ಕಾರ ತನ್ನ ಪಾಲಿನ 300 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಕಾರ್ಖಾನೆಗಳ ಮಾಲೀಕರು ಪ್ರತಿ ಟನ್ ಗೆ 50 ರೂಪಾಯಿ ನೀಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article