ಪ್ರಜಾಸ್ತ್ರ ಸುದ್ದಿ
ಬೆಳಗಾವಿ(Belagavi): ಜಿಲ್ಲೆಯ ಗುರ್ಲಾಪುರ ಕ್ರಾಸ್ ಹತ್ತಿರ ಕಳೆದ ಏಳು ದಿನಗಳಿಂದ ಕಬ್ಬು ಬೆಳೆಗಾರರು ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಸೇರಿರುವ ರೈತರು ತಮಗೆ ನ್ಯಾಯ ಸಿಗುವ ತನಕ ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಇವರ ಕಡೆ ಜಿಲ್ಲೆಯ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ನೋಡದೆ ಇರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆ ಹೋರಾಟಗಾರರನ್ನು ಭೇಟಿಯಾಗಲು ಕಾನೂನು ಸಚಿವ ಎಚ್.ಕೆ ಪಾಟೀಲರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರಂತೆ.
ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಬುಧವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸಚಿವ ಎಚ್.ಕೆ ಪಾಟೀಲ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ರೈತ ಮುಖಂಡರೊಂದಿಗೆ ಈ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇದೆ ರೀತಿ ವಿಜಯಪುರ ಸೇರಿ ಅನೇಕ ಜಿಲ್ಲೆಗಳಲ್ಲಿ ರೈತರ ಹೋರಾಟ ನಡೆಸಿದ್ದು, 3,500 ರೂಪಾಯಿ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.




