Ad imageAd image

ಸಿಂದಗಿ: ಪುರಸಭೆ ಮುಖ್ಯಾಧಿಕಾರಿ ಅಮಾನತಿಗೆ ಸಚಿವರ ಸೂಚನೆ

ಅಲ್ಪಸಂಖ್ಯಾತರ ಇಲಾಖೆ ಹಾಗೂ ವಕ್ಫ್ ಬೋರ್ಡ್ ವತಿಯಿಂದ ಸಚಿವ ಜಮೀರ್ ಅಹ್ಮದ್ ಖಾನ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲೆಯ ಸಿಂದಗಿ

Nagesh Talawar
ಸಿಂದಗಿ: ಪುರಸಭೆ ಮುಖ್ಯಾಧಿಕಾರಿ ಅಮಾನತಿಗೆ ಸಚಿವರ ಸೂಚನೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಅಲ್ಪಸಂಖ್ಯಾತರ ಇಲಾಖೆ ಹಾಗೂ ವಕ್ಫ್ ಬೋರ್ಡ್ ವತಿಯಿಂದ ಸಚಿವ ಜಮೀರ್ ಅಹ್ಮದ್ ಖಾನ್ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲೆಯ ಸಿಂದಗಿ ಪುರಸಭೆ ಮುಖ್ಯಾಧಿಕಾರಿ ಸುರೇಶ ನಾಯಕ ಗೈರಾಗಿದ್ದರು. ಯಾಕೆಂದು ವಿಚಾರಿಸಿದಾಗ ಶಾಸಕರ ಜೊತೆಯಲ್ಲಿ ಇರುವುದಾಗಿ ಹೇಳಿದ್ದರಂತೆ. ಆದರೆ, ಸಚಿವರು ಶಾಸಕರಿಗೆ ಫೋನ್ ಮಾಡಿ ವಿಚಾರಿಸಿದರೆ ತಮ್ಮೊಂದಿಗೆ ಇಲ್ಲವೆಂದು ಹೇಳಿದ್ದಾರೆ.

ಸುಳ್ಳು ಹೇಳಿ ಸಭೆಗೆ ಬಂದಿಲ್ಲವೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಸಿಂದಗಿ ಪುರಸಭೆ ಮುಖ್ಯಾಧಿಕಾರಿ ಅಮಾನತಿಗೆ ಸೂಚಿಸಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಏನು ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿ. ಇನ್ನು ಸಭೆಯ ಕುರಿತು ವಾರ್ತಾ ಇಲಾಖೆಯಿಂದ ಬಂದ ಮಾಹಿತಿಯಲ್ಲಿ ಸಿಂದಗಿ ತಾಲೂಕು ಪಂಚಾಯ್ತಿ ಇಒ ಎಂದು ಹೇಳಲಾಗಿತ್ತು. ಈ ಬಗ್ಗೆ ವಾರ್ತಾ ಇಲಾಖೆ ಸ್ಪಷಟನೆ ನೀಡಿದ್ದು, ಕಣ್ತಪ್ಪಿನಿಂದ ಸಿಂದಗಿ ಪುರಸಭೆ ಮುಖ್ಯಾಧಿಕಾರಿ ಬದಲು ತಾಲೂಕು ಪಂಚಾಯ್ತಿ ಇಒ ಎಂದಾಗಿದೆ ಎಂದು ಪ್ರಕಟಣೆಯಲ್ಲಿ ಸ್ಪಷ್ಟೀಕರಣ ನೀಡಿದ್ದಾರೆ.

WhatsApp Group Join Now
Telegram Group Join Now
Share This Article