ಪ್ರಜಾಸ್ತ್ರ ಸುದ್ದಿ
ಸಿಂದಗಿ(Sindagi): ಪಟ್ಟಣದ ಹೊರವಲಯದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 4 ಕೊಠಡಿಗಳ ನಿರ್ಮಾಣಕ್ಕೆ ಶಾಸಕ ಅಶೋಕ ಮನಗೂಳಿ ಬುಧವಾರ ಭೂಮಿಪೂಜೆ ನೆರವೇರಿಸಿದರು. 2023-24ನೇ ಸಾಲಿನ ವಿವೇಕ ಯೋಜನೆ ಅಡಿಯಲ್ಲಿ 4 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಇದರ ಭೂಮಿಪೂಜೆಯನ್ನು ಮಾಡಿದರು. ಈ ವೇಳೆ ಮಾತನಾಡಿದ ಅವರು, ನನ್ನ ಅಧಿಕಾರದ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು. ಗ್ರಾಮೀಣ ಭಾಗದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಓದುವ ಸರ್ಕಾರಿ ಶಾಲಾ, ಕಾಲೇಜುಗಳ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದರು.
ಈ ವೇಳೆ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಪುರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹಣಮಂತ ಸುಣಗಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಪ್ರಾಚಾರ್ಯರು, ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈ ವೇಳೆ ಹಾಜರಿದ್ದರು.