Ad imageAd image

ದೇಶಕ್ಕೆ ಸಂದೇಶ ಸಾರುವ ಕಾರ್ಯಕ್ರಮ: ಶಾಸಕ ಅಶೋಕ ಮನಗೂಳಿ

Nagesh Talawar
ದೇಶಕ್ಕೆ ಸಂದೇಶ ಸಾರುವ ಕಾರ್ಯಕ್ರಮ: ಶಾಸಕ ಅಶೋಕ ಮನಗೂಳಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆಯಲ್ಲಿ ಮುಂದೂಡಿದ್ದ ಗಾಂಧಿ ಭಾರತ ಕಾರ್ಯಕ್ರಮ ಇದೇ ಜನವರಿ 21ರಂದು ಬೆಳಗಾವಿಯಲ್ಲಿ ನಡೆಯಲಿದೆ ಎಂದು ಶಾಸಕ ಹಾಗೂ ಕಾರ್ಯಕ್ರಮದ ಸಿಂದಗಿ ಉಸ್ತುವಾರಿ ಅಲ್ಲಮಪ್ರಭು ಪಾಟೀಲ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಿಟಿಷರ ಗುಲಾಮಗಿರಿಯಿಂದ ಹೊರ ಬರಲು ಹೋರಾಡಿದ ಗಾಂಧಿಯವರು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಅದಕ್ಕೆ ಈಗ 100 ವರ್ಷ ತುಂಬಿದೆ. ಇದರ ನೆನಪು ಹಾಗೂ ಮುಂದಿನ ಪೀಳಿಗೆಗೆ ಇತಿಹಾಸ ತಿಳಿಸುವ ನಿಟ್ಟಿನಲ್ಲಿ ಜೈ ಬಾಪು ಜೈ ಭೀಮ ಜೈ ಸಂವಿಧಾನ ಅಡಿಯಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.

ಸಿಂದಗಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಕಳೆದ ಡಿಸೆಂಬರ್ 26, 27ರಂದು ಆಯೋಜಿಸಿದ್ದ ಕಾರ್ಯಕ್ರಮ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನಲೆಯಲ್ಲಿ ಮುಂದೂಡಲಾಗಿತ್ತು. ಈಗ ಜನವರಿ 21ರಂದು ಆಯೋಜಿಸಲಾಗಿದೆ. ಸಿಂದಗಿ ಮತಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ಸಂಬಂಧ ಪೂರ್ವಭಾವಿ ಸಭೆ ನಡೆಸಲಾಗಿದೆ. ಈ ಕಾರ್ಯಕ್ರಮ ಯಶಸ್ವಿಗೊಳಿಸುವ ಮೂಲಕ ದೇಶಕ್ಕೆ ಸಂದೇಶ ಸಾರಲಾಗುತ್ತೆ. ಹೀಗಾಗಿ ಸಿಂದಗಿ ಮತಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಈ ವೇಳೆ ಸಿಂದಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾದಿಕ್ ಸುಂಬಡ, ಸಿಂದಗಿ ಪುರಸಭೆ ಅಧ್ಯಕ್ಷ ಶಾಂತವೀರ ಬಿರಾದಾರ, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಮಲ್ಲಣ್ಣ ಸಾಲಿ, ಕೆಪಿಸಿಸಿ ಸದಸ್ಯ ಎಂ.ಎ ಖತೀಬ, ಕಾಂಗ್ರೆಸ್ ಮುಖಂಡ ಸುರೇಶ ಕೊಳಾರಿ ಸೇರಿದಂತೆ ಅನೇಕರು ವೇದಿಕೆ ಮೇಲಿದ್ದರು.

WhatsApp Group Join Now
Telegram Group Join Now
Share This Article