Ad imageAd image

ಎಸ್.ಎಂ ಕೃಷ್ಣ ದೂರದೃಷ್ಟಿ ಎಲ್ಲರಿಗೂ ಪ್ರೇರಣೆ: ಶಾಸಕ ಅಶೋಕ ಮನಗೂಳಿ

ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ ಕೃಷ್ಣ(93) ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ ನಸುಕಿನಜಾವ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Nagesh Talawar
ಎಸ್.ಎಂ ಕೃಷ್ಣ ದೂರದೃಷ್ಟಿ ಎಲ್ಲರಿಗೂ ಪ್ರೇರಣೆ: ಶಾಸಕ ಅಶೋಕ ಮನಗೂಳಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ ಕೃಷ್ಣ(93) ಅವರು ವಯೋಸಹಜ ಕಾಯಿಲೆಯಿಂದ ಮಂಗಳವಾರ ನಸುಕಿನಜಾವ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಟ್ಟಣದಲ್ಲಿ ಗೌರವ ನಮನ ಸಲ್ಲಿಸಲಾಯಿತು. ಪಕ್ಷದ ಕಚೇರಿಯಲ್ಲಿ ಶಾಸಕ ಅಶೋಕ ಮನಗೂಳಿ, ಮಾಜಿ ಶಾಸಕ ಶರಣಪ್ಪ ಸುಣಗಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಸೇರಿ ಹಲವು ನಾಯಕರು ಸಂತಾಪ ಸೂಚಿಸಿದರು.

ಮುಖ್ಯಮಂತ್ರಿಯಾಗಿ ನಾಡಿನ ಅಭಿವೃದ್ಧಿಯಲ್ಲಿ ಎಸ್.ಎಂ ಕೃಷ್ಣ ಅವರ ಪಾತ್ರ ಬಹುದೊಡ್ಡದಿದೆ. ಮಾದರಿಯ ರಾಜಕಾರಣ ಮಾಡಿದ ಧೀಮಂತ ನಾಯಕ. ಅವರ ದೂರದೃಷ್ಟಿ ಪ್ರತಿಯೊಬ್ಬರಿಗೂ ಪ್ರೇರಣೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಿ, ಮುಖ್ಯಮಂತ್ರಿಯಾಗಿ, ವಿದೇಶಾಂಗ ಸಚಿವರಾಗಿ ರಾಜ್ಯಕ್ಕೆ ಅವರು ನೀಡಿದ ಕೊಡುಗೈ ಬಹುದೊಡ್ಡದಿದೆ ಎಂದು ಹೇಳಿದರು.

ಪುರಸಭೆ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಮಾಜಿ ಉಪಾಧ್ಯಕ್ಷ ಹಾಸೀಂ ಆಳಂದ, ಶಿವನಗೌಡ ಬಿರಾದಾರ, ಎಂ.ಎಂ ಖತೀಬ, ಸಿದ್ದಣ್ಣ ಹಿರೇಕುರಬರ, ಮಹಮ್ಮದ್ ಪಟೇಲ, ಅಶ್ವಿನಿ ಪಾಟೀಲ, ಶಾರದಾ ಬೆಟಗೇರಿ, ಜ್ಯೋತಿ ಗುಡಿಮನಿ, ನೂರುಅಹ್ಮದ್ ಅತ್ತರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article